You are here
Home > ವಿಶೇಷ > ಕನ್ನಡ ಕಲಿಯದಿದ್ದರೆ ಕನ್ನಡ ನಾಡಿಗೆ ಮಾಡುವ ಅವಮಾನ;ಸಿಎಂ

ಕನ್ನಡ ಕಲಿಯದಿದ್ದರೆ ಕನ್ನಡ ನಾಡಿಗೆ ಮಾಡುವ ಅವಮಾನ;ಸಿಎಂ

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಸುದೀರ್ಘ ಇತಿಹಾಸ ಹಾಗೂ ಲಿಪಿಯನ್ನು ಹೊಂದಿರುವ ಭಾಷೆ ಕನ್ನಡ. ಕನ್ನಡ ಭಾಷೆಯ ಬಗ್ಗೆ ಅಭಿಮಾನವನ್ನು ಹೊಂದಿರಬೇಕೆ ಆದ್ರೆ ಅತಿಯಾದ ಉದಾರಿತನ ಬೇಡ. ಕನ್ನಡೇತರರು ಕನ್ನಡ ಕಲಿಯುವ ವಾತಾವರಣ ನಿರ್ಮಾಣ ಮಾಡಬೇಕು. ಯಾವುದೇ ಭಾಷೆಯನ್ನು ಕಲಿಯಿರಿ ಆದ್ರೆ ಕನ್ನಡವನ್ನು ಕಲಿಯದೇ ಇರುವುದು ಕನ್ನಡ ನಾಡಿಗೆ ಮಾಡುವ ಅವಮಾನ, ಮೊದಲು ಕನ್ನಡಿಗ ನಂತರ ಭಾರತೀಯ ಎಂಬ ಭಾವನೆ ಪ್ರತಿಯೊಬ್ಬ ಕನ್ನಡಿಗರಲ್ಲಿ ಮೂಡಬೇಕು. ನಮ್ಮ ಬದುಕಿನ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಇರಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ರು.

ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆದ 62ನೇ ಕನ್ನಡರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವ್ರು ಮಾತನಾಡಿದ್ರು. ಇನ್ನು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಕನ್ನಡ ಕಲಿಕೆ ಕಡ್ಡಾಯ ಈ ಕಲಿಕೆ ಸುಲಭ ಉಪಾಯ ಎಂಬ ಧ್ಯೇಯದೊಂದಿಗೆ ಆರಂಭಗೊಳ್ಳುತ್ತಿರುವ ಕನ್ನಡ ಸೌರಭ ಅಂತರ್ಜಾಲವನ್ನು ಲೋಕಾರ್ಪಣೆಗೊಳಿಸಿದ್ರು.

ಅಂದಹಾಗೇ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರನ್ನು ಅತಿಥಿಗಳಾಗಿ ಆಹ್ವಾನಿಸಲಾಗಿತ್ತು. ಆದ್ರೆ ಎಲ್ಲಾ ನಾಯಕರು ಸಾಮೂಹಿಕ ಗೈರಾಗಿದ್ದು ವಿಶೇಷವಾಗಿತ್ತು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಆರ್.ರೋಷನ್‍ಬೇಗ್, ತನ್ವೀರ್ ಸೇಠ್ ಹಾಗೂ ಮೇಯರ್ ಸಂಪತ್ ರಾಜ್ ಉಪಸ್ಥಿತರಿದ್ದರು.

Leave a Reply