You are here
Home > ವಿಶೇಷ > ರಾಜ್ಯಕ್ಕೆ ಬಹು ನಿರೀಕ್ಷಿತ ಶಾನ್ಯ ಮಾರುತ ಪ್ರವೇಶ!

ರಾಜ್ಯಕ್ಕೆ ಬಹು ನಿರೀಕ್ಷಿತ ಶಾನ್ಯ ಮಾರುತ ಪ್ರವೇಶ!

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಬಹು ನಿರೀಕ್ಷಿತ ಈಶಾನ್ಯ ಮಾರುತಗಳು ನಿನ್ನೆ ದಕ್ಷಿಣ ರಾಜ್ಯಗಳನ್ನು ಪ್ರವೇಶಿಸಿದ್ದು, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಕ್ಕೆ ಹೊಮದಿಕೊಂಡಿರುವ ಕೇರಳ, ಆಂಧ್ರಪ್ರದೇಶದ ದಕ್ಷಿಣ ಕರಾವಳಿ, ರಾಯಲಸೀಮಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿಗೆ ಈಶಾನ್ಯ ಮರುತಗಳು ಹಿಂಗಾರು ಮಳೆಯನ್ನು ಹೊತ್ತು ತರಲಿವೆ ಅಂತ ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಬಂಗಾಳಕೊಲ್ಲಿಯಿಂದ ತಮಿಳುನಾಡು, ಪುದುಚೇರಿ ಕರಾವಳಿಯ ಮೂಲಕ ದಕ್ಷಿಣ ರಾಜ್ಯಗಳನ್ನು ಪ್ರವೇಶಿಸಲಿರುವ ಈಶಾನ್ಯ ಮಾರುತಗಳು ಬಿರುಗಾಳಿ, ಗುಡುಗು ಸಹಿತ ಮಳೆ ಹೊತ್ತು ತರಲಿವೆ. ಒಳನಾಡು ಕರ್ನಾಟಕ ಮತ್ತು ಕರಾವಳಿ ತೀರದಲ್ಲಿ ಮುಂದಿನ ಮೂರು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಮಾರುತಗಳು ಎರಡು ತಿಂಗಳ ಕಾಲ ಅಂದ್ರೆ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಭಾರೀ ಮಳೆ ಸುರಿಸಿ ಅ.25ರಂದು ನಿರ್ಗಮಿಸಿದ್ದವು.

ಬಂಗಾಳಕೊಲ್ಲಿಯಿಂದ ಗಂಟೆಗೆ 45ರಿಂದ 55ಕಿಮೀ ವೇಗದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗಲಿದ್ದು, 188ಎಂಎಂ ಮಳೆಯಾಗುವ ಸಾಧ್ಯತೆಯಿದೆ ಅಂತ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ವಿಜ್ಞಾನಿ ಎಸ್‍ಎಸ್‍ಎಂ ಗವಾಸ್ಕರ್ ತಿಳಿಸಿದ್ರು.

Leave a Reply