You are here
Home > ವಿಶೇಷ > ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೀಲಮಣಿ ರಾಜು ಆಯ್ಕೆ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೀಲಮಣಿ ರಾಜು ಆಯ್ಕೆ

ಉಪಸಂಪಾದಕ
ಮಾಲೂರು ಜಿ.ಶಶಿಕುಮಾರ್ ಶೆಟ್ಟಿ

ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೀಲಮಣಿ ಎನ್ ರಾಜು ಅವ್ರನ್ನು ಆಯ್ಕೆ ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ.

ಹಾಲಿ ಡಿಜಿಪಿಯಾಗಿರುವ ಆರ್.ಕೆ.ದತ್ತ ಅವ್ರ ಅಧಿಕಾರಾವಧಿ ಇಂದು (ಅ.31) ಮುಕ್ತಾಯವಾಗಲಿದ್ದು, ಇವ್ರ ಸ್ಥಾನಕ್ಕೆ 1983 ಬ್ಯಾಚಿನ ಐಪಿಎಸ್ ಅಧಿಕಾರಿ ನೀಲಮಣಿ ರಾಜು ಅವ್ರು ನೂತನ ಡಿಜಿಪಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ.

ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್.ರೆಡ್ಡಿ, ಕಿಶೋರ್ ಚಂದ್ರ ಮತ್ತು ನೀಲಮಣಿ ರಾಜು ನಡುವೆ ಡಿಜಿಪಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಆದ್ರೆ ಅಂತಿಮವಾಗಿ ಹಿರಿತನ ಮತ್ತು ಸೇವಾ ಜೇಷ್ಠತೆಯ ಆಧಾರದ ಮೇಲೆ ನೀಲಮಣಿರಾಜು ಅವ್ರನ್ನು ಸರ್ಕಾರ ಆಯ್ಕೆ ಮಾಡಿದೆ.

25 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿದ್ದ ನೀಲಮಣಿ ರಾಜು ಅವ್ರು ಇತ್ತೀಚೆಗೆ ರಾಜ್ಯಕ್ಕೆ ಮರಳಿದ್ದರು. ಇವ್ರು ಆಂತರಿಕ ವಿಭಾಗದ ಭದ್ರತೆಯ ಡಿಜಿಪಿ, ರಾಜ್ಯ ಗೃಹರಕ್ಷಕ, ಅಗ್ನಿಶಾಮಕ ದಳದ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.

 

Leave a Reply